ವೀರಪಾಂಡ್ಯ ಕಟ್ಟಬೊಮ್ಮನ್ ೧೮ ನೇ ಶತಮಾನದಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪಾಂಚಾಲಕುರಿಚ್ಚಿ ಎಂಬ ಗ್ರಾಮದ ದಳವಾಯಿ ಹಾಗೂ ಪಾಳೇಗಾರನಾಗಿದ್ದ. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿಸ್ತರಣಾವಾದ, ಆಕ್ರಮಣ ಮತ್ತು ದಬ್ಬಾಳಿಕೆಯ ವಿರುದ್ಧ ತಿರುಗಿಬಿದ್ದವರಲ್ಲಿ ಮೊದಲಿಗನ ಸ್ಥಾನದಲ್ಲಿ ನಿಲ್ಲುವ ಕಟ್ಟಬೊಮ್ಮನ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ. ಭಾರತದಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆಯುವ ಸುಮಾರು ೬೦ ವರ್ಷಗಳಿಗೂ ಮುಂಚೆಯೇ ಬ್ರಿಟೀಷರ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ತಿರುಗಿ ಬಿದ್ದು ಬ್ರಿಟಿಷರಿಗೆ ಸೆರೆಯಾಗಿ ತಮಿಳು ನೆಲದಲ್ಲಿ ಹುತಾತ್ಮನಾದ ಕಟ್ಟಬೊಮ್ಮನ್ ಬಹಳಷ್ಟು ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಪೂರ್ತಿಯ ಸೆಲೆ
ಹಿನ್ನೆಲೆ:
ತಮಿಳುನಾಡಿನ ಈಗಿನ ತೂತುಕುಡಿ ಜಿಲ್ಲೆಯ ಪಾಂಚಾಲಕುರಿಚ್ಚಿ ಎಂಬ ಸ್ಥಳದಲ್ಲಿ ಜಗವೀರ ಕಟ್ಟಬೊಮ್ಮನ್ ಹಾಗು ಆರ್ಮುಗಟ್ಟಮ್ಮಾಳ್ ದಂಪತಿಗಳಿಗೆ ಮೊದಲ ಮಗನಾದ ವೀರಪಾಂಡ್ಯ ಕಟ್ಟಬೊಮ್ಮನ್ ಜನವರಿ ೩, ೧೭೬೦ ರಂದು ಜನಿಸಿದ. ಕಟ್ಟಬೊಮ್ಮನ್ ಗೆ ಇಬ್ಬರು ತಮ್ಮಂದಿರಿದ್ದರು, ಮೊದಲನೆಯವನು ದಳವಾಯಿ ಕುಮಾರಸ್ವಾಮಿ ಹಾಗೂ ಎರಡನೆಯವನು ದೊರೆಸಿಂಗಂ. ಫೆಬ್ರವರಿ ೨, ೧೭೯೦ ರಲ್ಲಿ ಪಾಂಚಾಲಕುರಿಚ್ಚಿಯ ಅಧಿಪತ್ಯವಹಿಸಿಕೊಳ್ಳುವ ಕಟ್ಟಬೊಮ್ಮನ್ ಅಂದಿನಿಂದ ಪಾಳೇಗಾರನಾಗುತ್ತಾನೆ.
0 Comments
Post a Comment